ʼರಾಜಕೀಯ-ಗೀಜಕೀಯ ಏನೂ ಇಲ್ಲ, ಕ್ರಮ ಕೈಗೊಂಡಿದಿನಿ ಅಂದ್ರೆ ಅರ್ಥ ಆಗಲ್ವಾ?ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಘಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿಗಳನ್ನಾಗಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದ್ದು, ಘಟನೆಗೆ ಮೇಲ್ನೋಟಕ್ಕೆ ‘ಜವಾಬ್ದಾರರು’ ಮತ್ತು ‘ಕರ್ತವ್ಯದಲ್ಲಿ ನಿರ್ಲಕ್ಷ್ಯ’ ತೋರಿದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಿಎಂ ಹೇಳಿದ್ದಾರೆ.

‘ಅವರು ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಘಟನೆಗೆ ಜವಾಬ್ದಾರರಾಗಿರುವ ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ನಾವು ಕ್ರಮ ಕೈಗೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಇಲ್ಲಿ ಹೇಳಿದರು.

ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ ನಂತರವೇ ಆರ್‌ಸಿಬಿ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಿನ್ನೆ, ಮುಖ್ಯಮಂತ್ರಿಗಳು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಐದು ಅಧಿಕಾರಿಗಳನ್ನು ಹಠಾತ್ತನೆ ಅಮಾನತುಗೊಳಿಸಿದ್ದಾರೆ’ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!