ಅತ್ಯಾಚಾರ ಆರೋಪ: ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ್ ಅಮಾನತುಗೊಳಿಸಿ ಕೇಂದ್ರ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯಿಂದ ಅತ್ಯಾಚಾರದ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಎಎಸ್‍ ಅಧಿಕಾರಿ ಜಿತೇಂದ್ರ ನಾರಾಯಣ್ ಅವರನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿದೆ.

ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಎಜಿಎಂಯುಟಿ ಕೇಡರ್ನ 1990ರ ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂದಿನ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಅವರನ್ನು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಎಂಎಚ್‌ಎ ಅಮಾನತುಗೊಳಿಸಿದೆ’ ಎಂದು ಎಂಎಚ್‌ಎ ಅಶುತೋಷ್ ಅಗ್ನಿಹೋತ್ರಿಯ ಜೆಟಿ ಸೆಸಿ (ಯುಟಿ ವಿಭಾಗ) ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!