ಅಯೋಧ್ಯೆಯ ಶ್ರೀ ರಾಮನ `ಪ್ರಾಣ ಪ್ರತಿಷ್ಠೆ’ ಗೆ ಬರಬೇಡಿ: ಅಡ್ವಾಣಿ, ಜೋಶಿಯಲ್ಲಿ ಮನವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ಭರದ ಸಿದ್ದತೆಗಳು ನಡೆಯುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಗಣ್ಯರ ಕರೆಯಯುವ ಕಾರ್ಯ ಶುರುವಾಗಿದೆ.

ಈ ನಡುವೆ ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಬಿಜೆಪಿ ಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ (LK Advani) ಹಾಗೂ ಮುರಳಿ ಮನೋಹರ್ ಜೋಶಿ (Murli Manohar Joshi) ಅವರಿಗೆ ವಿಶೇಷ ಮನವಿ ಮಾಡಿದ್ದಾರೆ.

ಅದೇನೆಂದರೆ ಇಬ್ಬರೂ ಹಿರಿಯರು, ಅವರ ವಯಸ್ಸನ್ನು ಪರಿಗಣಿಸಿ ಉದ್ಘಾಟನಾ ಸಮಾರಂಭಕ್ಕೆ ಬಾರದಂತೆ ಮನವಿ ಮಾಡಿದ್ದಾರೆ .

ಆರೋಗ್ಯ ಮತ್ತು ವಯೋಸಹಜ ಕಾರಣಗಳಿಂದಾಗಿ ಮುರಳಿ ಮನೋಹರ್ ಜೋಶಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆಅವರೂ ಸಮ್ಮತಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.

2024ರ ಜನವರಿ 15ರ ಒಳಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಿದ್ಧತೆಗಳು ಪೂರ್ಣಗೊಳ್ಳಲಿವೆ. `ಪ್ರಾಣ ಪ್ರತಿಷ್ಠೆ’ (Pran Pratishtha) ಪೂಜೆಯು ಜನವರಿ 16 ರಂದು ಪ್ರಾರಂಭವಾಗಿ ಜ.22ರ ವರೆಗೆ ನಡೆಯಲಿದೆ. ಸುಮಾರು 150 ಸಂತರು ಮತ್ತು ಋಷಿಮುನಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂತಶ್ರೇಷ್ಠ ಶಂಕರಾಚಾರ್ಯ ತತ್ವಶಾಸ್ತ್ರ ಪರಂಪರೆಯ 6 ಸಂತರು ಭಾಗವಹಿಸಲಿದ್ದಾರೆ. ಅಷ್ಟುಮಾತ್ರವಲ್ಲದೇ ಸಮಾರಂಭಕ್ಕೆ ಸುಮಾರು 4,000 ಸಂತರು, 2,200 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಕಾಶಿ ವಿಶ್ವನಾಥ, ವೈಷ್ಣೋದೇವಿಯಂತಹ (Vaishnodevi) ಪ್ರಮುಖ ದೇವಾಲಯಗಳ ಮುಖ್ಯಸ್ಥರು ಮತ್ತು ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನೂ ಆಹ್ವಾನಿಸಲಾಗಿದೆ ಎಂದು ವಿವರಿಸಿದ್ದಾರೆ.

ಆಧ್ಯಾತ್ಮಿಕ ಗುರು ದಲೈಲಾಮಾ, ಕೇರಳದ ಮಾತಾ ಅಮೃತಾನಂದಮಯಿ, ಯೋಗ ಗುರು ಬಾಬಾ ರಾಮ್‌ದೇವ್, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ದೇಶಕ ಮಧುರ್ ಭಂಡಾರ್‌ಕರ್, ಪ್ರಮುಖ ಉದ್ಯಮಿಗಳಾದ ಮುಕೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋದ ನಿರ್ದೇಶಕ ನೀಲೇಶ್ ದೇಸಾಯಿ ಸೇರಿದಂತೆ ಹಲವು ಖ್ಯಾತ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ವಿವಿಧ ಮಠಗಳು, ದೇವಸ್ಥಾನಗಳು ಮತ್ತು ಮನೆಗಳು ಸೇರಿದಂತೆ 600 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!