ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್ ಮೇಲ್: ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ಆನಂದ ಗುರೂಜಿ ದೂರು ನೀಡಿದ್ದಾರೆ.

ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ ವಸಂತ (ಎ2) ವಿರುದ್ಧ ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆನಂದ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣ ಸಂಬಂಧ ಕೋರ್ಟ್​ನಿಂದ ತಡೆಯಾಜ್ಞೆ ತರಲಾಗಿದೆ. ಆದರೂ ಸಹ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.

ಅಶ್ಲೀಲ ವೀಡಿಯೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!