ಆಸ್ಟ್ರೇಲಿಯಾದಿಂದ ಲಯಬದ್ಧ ಬ್ಯಾಟಿಂಗ್: ಟೀಂ ಇಂಡಿಯಾ ಗೆಲುವಿಗೆ ಬೃಹತ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದಆಸೀಸ್ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 352 ರನ್ ಬಾರಿಸಿದ್ದು ಆತಿಥೇಯ ಟೀಂ ಇಂಡಿಯಾಗೆ ಸವಾಲಿನ ಗುರಿ ನೀಡಿದೆ.

ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಸ್ಪೋಟಕ ಬ್ಯಾಟಿಂಗ್ ಮೂಲಕ ತಬ್ಬಿಬ್ಬಾಗುವಂತೆ ಮಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 8.1 ಓವರ್‌ಗಳಲ್ಲಿ 78 ರನ್‌ಗಳ ಜತೆಯಾಟವಾಡಿತು. ಮಿಂಚಿನ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ ಕೇವಲ 34 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಬಾರಿಸಿ ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಮೂರು ಪಂದ್ಯಗಳಲ್ಲೂ ಸ್ಥಿರ ಪ್ರದರ್ಶನ ತೋರಿದ ವಾರ್ನರ್, ಹ್ಯಾಟ್ರಿಕ್ ಫಿಫ್ಟಿ ಸಿಡಿಸಿ ಮಿಂಚಿದರು.

ಎರಡನೇ ವಿಕೆಟ್‌ಗೆ ಈ ಜೋಡಿ 137 ರನ್ ಜತೆಯಾಟ ನಿಭಾಯಿಸಿತು. ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ಕೇವಲ 4 ರನ್‌ಗಳಿಂದ ಶತಕ ವಂಚಿತರಾದರು. ಮಿಚೆಲ್ ಮಾರ್ಷ್‌ 84 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 96 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸ್ಟೀವ್ ಸ್ಮಿತ್(74) ಅವರನ್ನು ಬಲಿ ಪಡೆಯುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು.

ಒಂದು ಹಂತದಲ್ಲಿ ಆಸ್ಟ್ರೇಲಿಯಾ 31.3 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 142 ರನ್‌ ಗಳಿಸಿತ್ತು. ಹೀಗಾಗಿ ಆಸೀಸ್ ಅನಾಯಾಸವಾಗಿ ಇನ್ನುಳಿದ 18.3 ಓವರ್‌ಗಳಲ್ಲಿ 150 ರನ್ ಕಲೆಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸ್ಮಿತ್ ವಿಕೆಟ್ ಪತನದ ಬಳಿಕ ಆಸೀಸ್ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಅಲೆಕ್ಸ್ ಕ್ಯಾರಿ(11), ಗ್ಲೆನ್ ಮ್ಯಾಕ್ಸ್‌ವೆಲ್(5) ಹಾಗೂ ಕ್ಯಾಮರೋನ್‌ ಗ್ರೀನ್‌(9) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!