ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಇಂಡಿಯಾ ನಾಟಕ ಸೂರ್ಯ ಕುಮಾರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.
ಮೂರನೇ ಪಂದ್ಯಕ್ಕೆ ಟೀಂ ಇಂಡಿಯಾದ ಆಡುವ 11 ರ ಬಳಗದಲ್ಲಿ ದೊಡ್ಡ ಬದಲಾವಣೆಯಾಗಿದೆ. ಮೊದಲೆರಡು ಪಂದ್ಯಗಳಲ್ಲಿ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದ ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅವರ ಜಾಗದಲ್ಲಿ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಬರೋಬ್ಬರಿ 14 ತಿಂಗಳ ನಂತರ ಶಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲಿದ್ದಾರೆ. ಮೊಹಮ್ಮದ್ ಶಮಿ ಈ ಹಿಂದೆ 2023 ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು.
ಉಭಯ ತಂಡಗಳು
ಭಾರತ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಜೇಮೀ ಸ್ಮಿತ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಮಾರ್ಕ್ ವುಡ್ ಮತ್ತು ಆದಿಲ್ ರಶೀದ್.