ಇದು 370 ಇಫೆಕ್ಟ್ : ಕಣಿವೆ ರಾಜ್ಯದಲ್ಲಿ ಶೂನ್ಯಕ್ಕಿಳಿದ ಹಾರಾಟ, ಕಲ್ಲು ತೂರಾಟ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ‘ಕಲ್ಲು ತೂರಾಟ’ ಶೂನ್ಯಕ್ಕೆ ಇಳಿದಿದ್ದು, ಅತಿರೇಕಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಣಿವೆ ರಾಜ್ಯದ ಸದ್ಯದ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಕಣಿವೆ ರಾಜ್ಯದಲ್ಲಿ ಪಾಕಿಸ್ತಾನದಿಂದ ಒಳನುಸುಳಿ ಬರುತ್ತಿರುವ ಉಗ್ರರ ಹಾವಳಿ ಮತ್ತು ದಾಳಿ ಇನ್ನೂ ಸಂಪೂರ್ಣ ನಿಂತಿಲ್ಲ. ಆದರೆ ಪ್ರಕರಣಗಳು ಇಳಿಮುಖವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ 2022ರಿಂದ ಇದುವರೆಗೆ ಸಿಆರ್‌ಪಿಎಫ್‌ನ 10 ಸಿಬ್ಬಂದಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ಸಿಬ್ಬಂದಿಗಳನ್ನು ಕಾಡುವ ಮಾನಸಿಕ ಒತ್ತಡ ಪರಿಹರಿಸಲು ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಸಿಬ್ಬಂದಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವ ’ಚೌಪಾಲ್’ ಕೂಡಾ ಒಳಗೊಂಡಿದೆ ಎಂದು ಹೇಳಿದ ಅವರು, ಅಪಾಯ ನಿಧಿಯಿಂದ ಆರ್ಥಿಕ ಸಹಾಯದ ಅಡಿಯಲ್ಲಿ, ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗೆ ನೀಡಲಾಗುವ ಪರಿಹಾರ ಧನದ ಮೊತ್ತವನ್ನು ರೂ. 20 ಲಕ್ಷದಿಂದ ರೂ. 30 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇತರ ಎಲ್ಲಾ ಪ್ರಕರಣಗಳಿಗೆ ಈ ಪರಿಹಾರ ಧನ ರೂ. 15 ಲಕ್ಷದಿಂದ ರೂ.
ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ವೇಳೆ ಒಟ್ಟು 41 ವಿಐಪಿಗಳಿಗೆ ಸಿಆರ್‌ಪಿಎಫ್‌ನಿಂದ ಭದ್ರತೆ ಒದಗಿಸಲಾಗಿತ್ತು. ಚುನಾವಣೆಯ ನಂತರ 27 ಮಂದಿಯ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಕೂಡಾ ಇದೇ ಸಂದರ್ಭ ಅವರು ಮಾಹಿತಿ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!