January19, 2026
Monday, January 19, 2026
spot_img

ಇದೇ ಅಕ್ಟೋಬರ್‌ 9ರಿಂದ ಜಗತ್ಪ್ರಸಿದ್ಧ ಹಾಸನಾಂಬೆ ಉತ್ಸವ ಆರಂಭ: ಈ ಬಾರಿ ಪಾಸ್ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವರ್ಷಕ್ಕೆ ಒಮ್ಮೆ ಮಾತ್ರ ದರುಶನ ಕರುಣಿಸುವ ಹಾಸನಾಂಬೆ ಉತ್ಸವಕ್ಕೆ ಇದೀಗ ದಿನಗಣನೆ ಶುರುವಾಗಿದೆ. ಈ ವರ್ಷ ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. 

ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರುಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರುಶನ ಸಿಗುತ್ತಿಲ್ಲ. ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರುಶನದ ವೇಳೆ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದೆ ಎಂದು ತಿಳಿಸಿದರು.

Must Read

error: Content is protected !!