ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ: ಸಚಿವ ಡಾ. ಸುಧಾಕರ್ ಭರವಸೆ

ಹೊಸದಿಗಂತ ವರದಿ,ಅಂಕೋಲಾ:

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ ಅವರು ಭರವಸೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಅಗತ್ಯತೆ ಕುರಿತಂತೆ ಮನವರಿಕೆ ಮಾಡಲಾಗಿದ್ದು ಅಧಿಕಾರಿಗಳ ತಂಡದೊಂದಿಗೆ ಜಿಲ್ಲೆಗೆ ಆಗಮಿಸಿ ಸ್ಥಳ ಪರಿಶೀಲನೆ ಮಾಡುವುದಾಗಿ ಸಚಿವ ಸುಧಾಕರ ತಿಳಿಸಿದರು.
ಕಾರವಾರದ ಮೆಡಿಕಲ್ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಿ ಅಲ್ಲಿಯೂ ಸಹ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿರುವ ಆರೋಗ್ಯ ಸಚಿವ ಡಾ.ಸುಧಾಕರ ಕಾರವಾರ ವೈದ್ಯಕೀಯ ಕಾಲೇಜಿಗೆ 160 ಕೋಟಿ ರೂಪಾಯಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯ ಇರುವ ಕಟ್ಟಡದ ನಿರ್ಮಾಣ ಆಗುತ್ತಿದೆ, ಕಟ್ಟಡಕ್ಕೆ ಇನ್ನೂ ಎರಡು ಅಂತಸ್ತು ಹೆಚ್ಚಳ ಮಾಡಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಬೇಕಾದ ಎಂ.ಆರ್. ಐ,ಯಂತ್ರ, ಕ್ಯಾನ್ಸರ್ ವಿಭಾಗ, ನ್ಯೂರೊ ವಿಭಾಗ, ಅಗತ್ಯ ತಜ್ಞ ವೈದ್ಯರ ಸೇವೆ, ಅಗತ್ಯ ಉಪಕರಣಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ,ಶಾಸಕಿ ರೂಪಾಲಿ ನಾಯ್ಕ,ಶಾಸಕ ದಿನಕರ ಶೆಟ್ಟಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ಧಿ ಮೊದಲಾದವರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!