ಉದಯಪುರ ಹಿಂದು ಕುಟುಂಬಕ್ಕೆ ಸಹಾಯ: 24 ಗಂಟೆಯಲ್ಲಿ ಸಂಗ್ರಹವಾಯಿತು 1 ಕೋಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಉದಯಪುರದಲ್ಲಿ ಹತ್ಯೆಗೀಡಾದ ಟೈಲರ್‌ ಕನ್ಹಯ್ಯಲಾಲ್‌ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಘೋಷೀಸಿದ್ದಾರೆ.

ಕನ್ಹಯ್ಯಲಾಲ್‌ ಅವರ ಕುಟುಂಬಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಕ್ರೌಡ್‌ ಫಂಡಿಂಗ್‌ ಮೂಲಕ ಸಮಾಜದ ಜನರಿಂದ ಈ ಹಣವನ್ನು ಸಂಗ್ರಹಿಸಲಾಗಿದೆ. ಕನ್ಹಯ್ಯರನ್ನು ರಕ್ಷಿಸುವ ವೇಳೆ ಗಾಯಗೊಂಡಿರುವ ಈಶ್ವರ್‌ ಸಿಂಗ್‌ ಹಾಗೂ ಅವರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ತಾವು ಹಾಗೂ ತಮ್ಮ ಕಾರ್ಯಕರ್ತರೊಂದಿಗೆ ಉದಯಪುರಕ್ಕೆ ಹೋಗಿ ಅವರ ಕುಟುಂಬಕ್ಕೆ ಈ ಹಣವನ್ನು ಹಸ್ತಾಂತರ ಮಾಡಲಿರುವುದಾಗಿ ಕಪಿಲ್‌ ಮಿಶ್ರಾ ತಿಳಿಸಿದ್ದಾರೆ.

ಈ ಕುರಿತಾಗಿ ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದು, ಇಂದು ಇಡೀ ಹಿಂದು ಸಮಾಜವು ಕನ್ಹಯ್ಯಾ ಲಾಲ್ ಅವರ ಕುಟುಂಬದೊಂದಿಗೆ ನಿಂತಿರುವುದನ್ನು ನೋಡಿ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ. ಅವರು ಶೀಘ್ರದಲ್ಲೇ ಈ ಹಣವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಿದ್ದಾರೆ.

ನಾವು ಕನ್ಹಯ್ಯಲಾಲ್‌ ಮಕ್ಕಳು ಮತ್ತು ಹೆಂಡತಿಯನ್ನು ಒಬ್ಬಂಟಿಯಾಗಿ ಬಿಡಲು ಸಾಧ್ಯವಿಲ್ಲ. ಅವರಿಗೆ ಏನಾಗುತ್ತದೆ ಎಂಬುದು ಪ್ರಶ್ನೆಯಾಗಿತ್ತು. ಇದೇ ಕಾರಣಕ್ಕೆ ಮೊದಲ ದಿನವೇ ಈ ಪ್ರಕ್ರಿಯೆ ಆರಂಭವಾಗಿದೆ. ಅದೃಷ್ಟವಶಾತ್, ಇಲ್ಲಿಯವರೆಗೆ, ಜಗತ್ತಿನಾದ್ಯಂತ 12,000 ಕ್ಕೂ ಹೆಚ್ಚು ಜನರು ಈ ಕಾರಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಕ್ರೌಡ್‌ ಫಂಡಿಂಗ್‌ನಲ್ಲಿ ಇಲ್ಲಿಯವರೆಗೆ 1.35 ಕೋಟಿ ರೂ.ಗಳನ್ನು ಸಂಗ್ರಹಿಸಿದೆ, ಒಂದು ತಿಂಗಳ ಗುರಿಯನ್ನು ಕೇವಲ 24 ಗಂಟೆಗಳಲ್ಲಿ ತಲುಪಿದ್ದೇವೆ ಎಂದು ಹೇಳಿದ್ದಾರೆ.

ರಾಜಸ್ಥಾನ ಸರ್ಕಾರದಿಂದ 51 ಲಕ್ಷ:
ಗುರುವಾರ ಉದಯಪುರದಲ್ಲಿ ಕನ್ಹಯ್ಯಲಾಲ್‌ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗ್ಲೆಹೊಟ್‌, 51 ಲಕ್ಷ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!