Friday, October 3, 2025

ಏಳನೇ ದಿನಕ್ಕೆ ಸಮಾಧಿ ಶೋಧ: ಇಂದು ಇನ್ನಷ್ಟು ನಿಗೂಢ ರಹಸ್ಯ ಬಿಚ್ಚಿಡುತ್ತಾ ಮಾಸ್ಕ್ ಮ್ಯಾನ್ ಮಾಹಿತಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರೀ ಕುತೂಹಲ ಕೆರಳಿಸಿರುವ ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಮಾಧಿ ಅಗೆಯುವ ಕಾರ್ಯ ಮಂಗಳವಾರ ಏಳನೇ ದಿನಕ್ಕೆ ಕಾಲಿಟ್ಟಿದೆ.

ಸೋಮವಾರ ಪಾಯಿಂಟ್ 11 ರ ಬದಲು ಗುಡ್ಡ ಪ್ರದೇಶದಲ್ಲಿರುವ ಬಂಗ್ಲೆಗುಡ್ಡೆ ಪರಿಸರದಲ್ಲಿ ಹೊಸ ಪಾಯಿಂಟ್ ನಲ್ಲಿ ಅಸ್ಥಿಗಳಿಗಾಗಿ ಶೋಧ ನಡೆದ ಬಳಿಕ ಇದೀಗ ಪ್ರಕರಣ ಇನ್ನಷ್ಟು ಕುತೂಹಲ‌ ಕೆರಳಿಸಿದ್ದು, ಇಂದು ತನಿಖೆ ಇನ್ನಷ್ಟು ತೀವ್ರಗೊಂಡಿದೆ.

ಸೋಮವಾರದ ಕಾರ್ಯಾಚರಣೆಯ ವೇಳೆ ದೂರುದಾರನು ಬಂಗ್ಲೆಗುಡ್ಡೆ ಪರಿಸರದಲ್ಲಿ ಹೊಸ ಪಾಯಿಂಟ್ ತೋರಿಸಿದ್ದ. ಇಲ್ಲಿ ಶೋಧ ಸಂದರ್ಭ ಕೆಲವೊಂದು ಕುರುಹುಗಳು ಲಭ್ಯವಾಗಿದ್ದವು. ಇದರ ಜಾಡು ಹಿಡಿದು ಇಂದು ತನಿಖೆ ಇನ್ನಷ್ಟು ತೀವ್ರಗೊಂಡಿದೆ.

ಸೋಮವಾರ ಸಿಕ್ಕಿದ್ದ ಕುರುಹುಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದ್ದು, ಈಗಾಗಲೇ ಮಣಿಪಾಲದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಜುಲೈ 19 ರಂದು ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.