ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ಶುಕ್ರವಾರ ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸುರವರಂ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

942ರ ಮಾರ್ಚ್‌ 25ರಂದು ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಕೊಂಡ್ರಾವಪಲ್ಲಿ ಗ್ರಾಮದಲ್ಲಿ ಜನಿಸಿದ ಸುರವರಂ ಸುಧಾಕರ ರೆಡ್ಡಿ ಎಡಪಂಥೀಯ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದರು. ವಿದ್ಯಾರ್ಥಿ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. 15 ವರ್ಷ ವಯಸ್ಸಿನವರಾಗಿದ್ದಾಗಲೇ ಕರ್ನೂಲ್‌ನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಆಂದೋಲನ ನಡೆಸಿ ಗಮನ ಸೆಳೆದಿದ್ದರು.

2012 ರಿಂದ 2019ರ ವರೆಗೆ, ಅವರು ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಮೂರು ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದ ಸುರವರಂ ಅವರು ಜೀವನದುದ್ದಕ್ಕೂ ಸಾಮೂಹಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಸರಳ, ಸಜ್ಜನಿಕೆಯ ಜೀವನ ಶೈಲಿಯಿಂದಾಗಿ ಜನಮನ ಗೆದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!