ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ನೇತೃತ್ವದ ಸಮಿತಿಯು ಡಿಸೆಂಬರ್ 21 ರಂದು ಭಾರತದ ಕುಸ್ತಿ ಫೆಡರೇಶನ್‌ಗೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಗೆದ್ದಿದ್ದಕ್ಕೆ ಫೋಗಟ್, ಎಂಎಸ್ ಮಲ್ಲಿಖ್, ಬಜರಂಗ್ ಪುನಿಯಾ ಬೇಸರ ವ್ಯಕ್ತಪಡಿದ್ದರು.ಭಾರತದ ಕುಸ್ತಿಪಟುಗಳು ತಮ್ಮ ಪ್ರಶಸ್ತಿ ವಾಪ್ಸಿ ಅಭಿಯಾನ ವನ್ನು ಪ್ರಾರಂಭಿಸಿದ್ದರು.
ಇದೀಗ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ದೆಹಲಿಯ ಕರ್ತವ್ಯ ಪಥದ ಮಾರ್ಗದಲ್ಲೇ ಖೇಲ್ ರತ್ನ, ಅರ್ಜುನ ಪ್ರಶಸ್ತಿಯನ್ನು ಬಿಟ್ಟು ಹೋಗಿದ್ದಾರೆ.
ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದಿದ್ದರಿಂದ ಕುಸ್ತಿಪಟು ಹೀಗೆ ಮಾಡಿದ್ದಾರೆ ಎನ್ನಲಾಗಿದೆ.
ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮಂಗಳವಾರ ಪ್ರಧಾನಿಗೆ ಬಹಿರಂಗ ಪತ್ರದಲ್ಲಿ ಪ್ರಶಸ್ತಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಇದಕ್ಕೂ ಮುಂಚೆ, ಸಾಕ್ಷಿ ಮಲಿಕ್ ಅವರು ಕುಸ್ತಿಗೆ ಕಣ್ಣೀರ ವಿದಾಯ ಹೇಳಿದ್ದರು. ಇದಾದ ಕೆಲವು ದಿನಗಳ ನಂತರ ಬಜರಂಗ್ ಪುನಿಯಾ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದರು.