ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) ಕರ್ನಾಟಕಕ್ಕೆ CWRC ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಕಳೆದ 15 ದಿನಗಳಿಂದಲೂ ಈಶಾನ್ಯ ಮಾನ್ಸೂನ್ ಮಾರುತದಿಂದ ಭಾರಿ ಮಳೆಯಾಗುತ್ತಿದೆ. ಕಳೆದೆರಡು ದಿನಗಳಿಂದ ಪ್ರವಾಹವೇ ಸೃಷ್ಟಿಯಾಗಿದೆ. ಹೀಗಿದ್ದರೂ, ಕಾವೇರಿ ನೀರು ನಿಯಂತ್ರಣ ಸಮಿತಿ ಈ ಸೂಚನೆ ನೀಡಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.
ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ಹಲವು ಬಾರಿ ವಾದ ಮಂಡಿಸುತ್ತಲೇ ಬರುತ್ತಿದ್ದಾರೆ. ಇದೀಗ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಡಿಸೆಂಬರ್ ಕೊನೆವರೆಗೂ ತಮಿಳುನಾಡಿಗೆ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ.