Saturday, October 25, 2025

ಕಳಪೆ ಆಟಕ್ಕೆ ಸೋಲಿನ ಬರೆ: ಭಾರತ ವಿರುದ್ಧ ಸರಣಿ ಗೆದ್ದ ಆಸ್ಟ್ರೇಲಿಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ಕಳೆದುಕೊಂಡಿದೆ.

ಪರ್ತ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ಗಿಲ್ ಪಡೆ, ಇದೀಗ ಅಡಿಲೇಡ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲೂ ಸೋಲು ಅನುಭವಿಸಿದೆ.

ರೋಹಿತ್‌ ಶರ್ಮಾ ಹಾಗೂ ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕಗಳ ಹೊರತಾಗಿಯೂ ಇನ್ನುಳಿದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ, ಎರಡನೇ ಏಕದಿನ ಪಂದ್ಯದಲ್ಲಿಯೂ 2 ವಿಕೆಟ್‌ಗಳಿಂದ ಸೋಲು ಅನುಭವಿಸಿತು.

ಭಾರತ ನೀಡಿದ್ದ 265 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ, 54 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಮ್ಯಾಥ್ಯೂ ಶಾರ್ಟ್‌ (74 ರನ್‌) ಹಾಗೂ ಕೂಪರ್‌ ಕಾನೀಲಿ (61 ರನ್‌) ಅವರ ಅರ್ಧಶತಕಗಳ ಬಲದಿಂದ ಆಸ್ಟ್ರೇಲಿಯಾ, 46.2 ಓವರ್‌ಗಳಿಗೆ 8 ವಿಕೆಟ್‌ ನಷ್ಟಕ್ಕೆ 265 ರನ್‌ ಗಳಿಸಿ ಎರಡು ವಿಕೆಟ್‌ ಗೆಲುವು ತನ್ನದಾಗಿಸಿಕೊಂಡಿತು.

error: Content is protected !!