ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಸರ್​ಪ್ರೈಸ್​​ ಗಿಫ್ಟ್ ಕೊಡಲು ಪ್ರಿಯಾ ಸಜ್ಜು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್​ವುಡ್​​ ನಟ ಕಿಚ್ಚ ಸುದೀಪ್ ಅವರಿಗೆ​ ನಾಳೆ ಹುಟ್ಟುಹಬ್ಬದ ಸಂಭ್ರಮ. ಈ ಕ್ಷಣವನ್ನು ಅವರ ಪತ್ನಿ ಮತ್ತಷ್ಟು ಸಂಭ್ರಮಿಸಲು ಸಜ್ಜಾಗಿದ್ದಾರೆ.

ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಫ್ಯಾನ್ಸ್ ಜೊತೆ ಕಿಚ್ಚನ ಹುಟ್ಟುಹಬ್ಬ ನಡೆಯಲಿದೆ. ಸರ್​ಪ್ರೈಸ್​​ ಗಿಫ್ಟ್ ಕೊಡುವ ಬಗ್ಗೆ ಪೋಸ್ಟ್ ಶೇರ್ ಮಾಡಿದ್ದಾರೆ.

ನಿಮ್ಮ ಪ್ರೀತಿಯ ಕಿಚ್ಚ ಸುದೀಪರ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಲು ಕಾತುರದಿಂದ ಕಾಯುತ್ತಿದ್ದೇನೆ. ಇಂದಿನ ಕಾರ್ಯಕ್ರಮದಲ್ಲಿ ನನ್ನ ಕಡೆಯಿಂದ ನಿಮ್ಮೆಲ್ಲರ ಪರವಾಗಿ ಕಿಚ್ಚನಿಗೆ ಒಂದು ವಿಶೇಷವಾದ ಅದ್ದೂರಿ ಅಚ್ಚರಿ ಕಾದಿದೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅಚ್ಚರಿಯನ್ನು ಆನಂದಿಸಿ, ಕಿಚ್ಚನನ್ನು ಹರಸಿ ಎಂದು ಪ್ರಿಯಾ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

ಜನ್ಮದಿನದ ಹೊಸ್ತಿಲಿನಲ್ಲಿ ‘ಅರಸು ಕ್ರಿಯೇಷನ್ಸ್​’ ಸಂಸ್ಥೆ ಕಡೆಯಿಂದ ಒಂದು ವಿಶೇಷವಾದ ಉಡುಗೊರೆ ನೀಡಲಾಗಿದೆ. ಆಕಾಶದಲ್ಲಿನ ಒಂದು ನಕ್ಷತ್ರಕ್ಕೆ ಕಿಚ್ಚ ಸುದೀಪ ಎಂದು ಹೆಸರು ಇಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!