Monday, September 15, 2025

ಕಿಲ್ಲರ್‌ ಆಗ್ತಿದ್ಯಾ ಬಿಎಂಟಿಸಿ? ಇಂದು ಚಕ್ರಕ್ಕೆ ಸಿಲುಕಿ 10 ವರ್ಷದ ಬಾಲಕಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಎಂಟಿಸಿ ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ.

ತನ್ವಿ (10) ಮೃತ ಬಾಲಕಿ. ತನ್ವಿ ಮಿಲಿಯನಿಯಂ ಸ್ಕೂಲ್‌ನಲ್ಲಿ 5 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಹರ್ಷಿತಾ ಅವರು ಮಗಳನ್ನು ಸ್ಕೂಲ್‌ಗೆ ಬಿಡಲು ಹೋದಾಗ ದುರ್ಘಟನೆ ನಡೆದಿದೆ. 

ಹರ್ಷಿತಾ ಅವರು ಮಗಳನ್ನು ಹೋಂಡಾ ಆಕ್ಟಿವಾದಲ್ಲಿ ಸ್ಕೂಲ್‌ಗೆ ಬಿಡಲು ತೆರಳಿದ್ದ ವೇಳೆ ಸ್ಕೂಟರ್ ಯಲಹಂಕದ ಕೋಗಿಲು ಮುಖ್ಯ ರಸ್ತೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಹತ್ತಿರ ಸ್ಕಿಡ್ ಆಗಿತ್ತು. 

ಈ ವೇಳೆ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ತನ್ವಿ ಕೆಳಕ್ಕೆ ಬಿದ್ದು, ಬಸ್‌ನ ಚಕ್ರದಡಿ ಸಿಲುಕಿದ್ದಳು. ಆಕೆಯ ಮೇಲೆಯೇ ಬಿಎಂಟಿಸಿ ಬಸ್‌ನ ಚಕ್ರ ಹರಿದಿದ್ದರಿಂದ ತನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ