ಕುಪ್ವಾರ : ಓರ್ವ ಉಗ್ರನ ಎನ್‌ಕೌಂಟರ್‌, ಮತ್ತೊಬ್ಬನ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಉಗ್ರನೊಬ್ಬನನ್ನು ಎನ್‌ಕೌಂಟರ್‌ ಮಾಡಿದ್ದಾರೆ. ಅಲ್ಲದೆ ಸೈನಿಕರು ಮತ್ತೊಬ್ಬ ಭಯೋತ್ಪಾದಕನ ಹೆಡೆಮುರಿ ಕಟ್ಟಿದ್ದಾರೆ.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಕುಪ್ವಾರದ ಲೋಲಾಬ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಬಂಧಿತ ಉಗ್ರ ಶೋಕೆಟ್​ ಅಹ್ಮದ್​ ಶೇಖ್​ ನೀಡಿದ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಕುಪ್ವಾರ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಉಗ್ರನೋರ್ವನನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದ್ದಾರೆ. ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಅಲ್ಲಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಈ ವೇಳೆ ಯೋಧರು ಪ್ರತಿದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಉಗ್ರನೋರ್ವನನ್ನು ಜೀವಂತವಾಗಿ ಬಂಧಿಸಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!