May 1, 2026
Friday, May 1, 2026
spot_img

ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುರಿ, ಮೇಕೆ ತುಂಬಿದ್ದ ಲಾರಿಗೆ KSRTC ಬಸ್ ಡಿಕ್ಕಿಯಾಗಿ ಲಾರಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡೇನಹಳ್ಳಿ ಬಳಿ ನಡೆದಿದೆ.

ಲಾರಿ ಚಾಲಕ ಸೀನಪ್ಪ (50), ನಜೀರ್ ಅಹ್ಮದ್ (36) ಮೃತರೆಂದು ಗುರುತಿಸಲಾಗಿದೆ.

ಲಾರಿ ಟಯರ್ ಪಂಚರ್ ಆಗಿ ರಸ್ತೆ ಬದಿ ಟಯರ್ ಬದಲಿಸುವ ವೇಳೆ, ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತೋರ್ವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !