March 16, 2026
Monday, March 16, 2026
spot_img

ಕೃಷ್ಣ ಜನ್ಮಾಷ್ಠಮಿ: ಆಗಸ್ಟ್ 16ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.16ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.16ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

ನಗರದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !