Thursday, September 11, 2025

ಕೆಂಪು ಕೋಟೆಗೆ ಪ್ರವೇಶಿಸಲು ಯತ್ನಿಸಿದ ಐವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ.

20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ. 

ಇದನ್ನೂ ಓದಿ