ಕೇಂದ್ರ ಸರಕಾರದ ಬೆನ್ನೆಲ್ಲೇ ಪೆಟ್ರೋಲ್‌- ಡೀಸೆಲ್‌ ಮೇಲಿನ ವ್ಯಾಟ್ ಕಡಿತಗೊಳಿಸಿದ ‘ಮಹಾ’ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಂದ್ರ ಸರಕಾರ ನಿನ್ನೆಯಷ್ಟೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿ ಆದೇಶ ನೀಡಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಭಾನುವಾರ ಕಡಿತಗೊಳಿಸಿದೆ.
ಪ್ರತಿ ಲೀಟರ್‌ಗೆ ಪೆಟ್ರೋಲ್‌ಗೆ ₹2.08 ಮತ್ತು ಡೀಸೆಲ್‌ಗೆ ₹1.44 ಕಡಿತ ಮಾಡಿದೆ.ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹2,500 ಕೋಟಿ ನಷ್ಟ ಉಂಟಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಮಾಹಿತಿ ನೀಡಿದೆ.‌
ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ ₹8 ಮತ್ತು ₹6 ಕಡಿತ ಮಾಡಿ ಶನಿವಾರ ಆದೇಶ ಹೊರಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!