₹ 1200 ಕೋಟಿ ವೆಚ್ಚದಲ್ಲಿ ಶಿರಾಡಿ ಘಾಟ್ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರದ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ₹ 1200 ಕೋಟಿಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.

ಎನ್.ಎಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ರಾಜ್ಯ ಸರಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಎಚ್. 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ.

ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಎಚ್.ಎ.ಐ.ಗೆ ಕೇಂದ್ರ ಸಚಿವರು ಸೂಚಿದ್ದಾರೆ.

ಶಿರಾಡಿ ಘಾಟ್ ರಸ್ತೆ ರಾಜ್ಯದ ಜೀವನಾಡಿ ಇದ್ದಂತೆ. ಈಗಿರುವ ರಸ್ತೆ ಕಿರಿದಾಗಿದೆ. ಇದನ್ನು ನಾಲ್ಕು ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!