ಕೊರೋನಾ ಆತಂಕದ ನಡುವೆ ರಾಜ್ಯದಲ್ಲಿ ಇಂದು 44 ಮಂದಿಗೆ ಪಾಸಿಟಿವ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೇಶದಲ್ಲಿ ಮತ್ತೆ ಕೊರೋನಾ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್‌ ಉಪತಳಿ ಜೆಎನ್ 1 (Covid JN 1) ಮೊದಲ ಪ್ರಕರಣ ಪತ್ತೆಯಾಗಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಇತ್ತ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಟೆಸ್ಟಿಂಗ್ ಹೆಚ್ಚಿಸಲು ತೀರ್ಮಾನಿಸಿದೆ. ಇಂದು(ಡಿಸೆಂಬರ್ 19) ಒಂದೇ ದಿನ 44 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರರೊಂದಿಗೆ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಪತ್ತೆಯಾದ ಕೋರೊನಾ ಕೇಸ್​ ಸಂಖ್ಯೆ 44, ಇಂದು ಆಸ್ಪತ್ರೆಯಿಂದ ಡಿಸ್ಜಾರ್ಜ್​ ಆದವರ ಸಂಖ್ಯೆ 35. ಇನ್ನು ರಾಜ್ಯದಲ್ಲಿ ಒಟ್ಟು ಸಕ್ರಿಯ ಕೊರೋನಾ ಕೇಸ್​ಗಳು 79 ಇವೆ. ಇದರೊಂದಿಗೆ ಕರ್ನಾಟಕದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.6.09ರಷ್ಟಿದೆ.

ಕೇರಳ ರಾಜ್ಯದಲ್ಲಿ ಜೆಎನ್​​1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕದಲ್ಲಿ ಆತಂಕ ಸೃಷ್ಟಿಯಾಗಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!