Tuesday, October 14, 2025

ಗಣೇಶ ಚತುರ್ಥಿಗೆ BBMP ಸಕಲ ಸಿದ್ಧತೆ: 75 ಏಕಗವಾಕ್ಷಿ ಕೇಂದ್ರ ಸ್ಥಾಪನೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವಾಹನ ವ್ಯವಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ಚತುರ್ಥಿ ಹಿನ್ನೆಲೆ ಬಿಬಿಎಂಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳ ಸ್ಥಾಪನೆ ಮಾಡಲಾಗಿದ್ದು, ಜೊತೆಗೆ ಬೆಂಗಳೂರಿನಾದ್ಯಂತ 489 ತಾತ್ಕಾಲಿಕ ಸಂಚಾರಿ ಕಲ್ಯಾಣ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಒದಗಿಸಲಿದೆ. ಅದಲ್ಲದೇ ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

error: Content is protected !!