ಗುಜರಾತ್ ದೋಣಿ ದುರಂತ : ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

‘ಗುಜರಾತ್’ನ ವಡೋದರಾ ನಗರದ ಹೊರವಲಯದಲ್ಲಿರುವ ಹರ್ನಿ ಸರೋವರದಲ್ಲಿ ಗುರುವಾರ ದೋಣಿ ಪಲ್ಟಿಯಾಗಿ ಶಾಲಾ ಮಕ್ಕಳು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ PMNRFನಿಂದ ತಲಾ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಟ್ವೀಟ್ ಮೂಲಕ ದುಃಖ ವ್ಯಕ್ತ ಪಡಿಸಿದ ಪ್ರಧಾನಿ ಮೋದಿ, ಅಪಘಾತದ ನಂತ್ರ, ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮಗುಚಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಕಚೇರಿ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!