Wednesday, September 3, 2025

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಗ್ರೇಟರ್‌ ಬೆಂಗಳೂರು ಪ್ರಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್‌, ಬೈರತಿ ಸುರೇಶ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌ ಪದನಿಮಿತ್ತ ಸದಸ್ಯರಾಗಿ ಪ್ರಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ.

ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳಾಗಿ ವಿಭಜಿಸಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಈಚೆಗೆ ಆದೇಶ ಹೊರಡಿಸಿತ್ತು.

ಇದನ್ನೂ ಓದಿ