Saturday, October 4, 2025

ಚೀನಾದ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ: ಪ್ರಧಾನಿ ಮೋದಿ ಜೊತೆ ವಾಂಗ್ ಯಿ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತಕ್ಕೆ ಭೇಟಿ ನೀಡಿರುವ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ, ಚೀನಾದ ಟಿಯಾಂಜಿನ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆಗೆ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರ ಸಂದೇಶ ಮತ್ತು ಆಹ್ವಾನವನ್ನು ವಾಂಗ್ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರಿಸಿದರು.

ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು ಮತ್ತು ಗಡಿ ವಿವಾದಕ್ಕೆ ನ್ಯಾಯಯುತ, ಸಮಂಜಸ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು ಎಂದು ಪ್ರಧಾನಿ ಕಚೇರಿ ತಿಳಿಸಿದೆ.