ಜಂತರ್ ಮಂತರ್ ನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಿದರು.
ಅಬರು ಅಖಿಲ ಭಾರತ ನ್ಯಾಯ ಬೆಲೆ ಅಂಗಡಿ ವಿತರಕರ ಒಕ್ಕೂಟದ ಉಪಾಧ್ಯಕ್ಷರಾಗಿದ್ದು, ಸಂಘಟನೆಯ ವಿವಿಧ ಬೇಡಿಕೆಗಳ ಪರಿಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರಸ್ತುತ ಜೀವನ ವೆಚ್ಚ ಪರಿಸ್ಥಿತಿಯೊಂದಿಗೆ ಅಂಗಡಿಗಳನ್ನು ನಡೆಸುವುದು ಕಷ್ಟಸಾಧ್ಯವಾಗಿದೆ. ಕೇಂದ್ರ ಸರ್ಕಾರ ಪರಿಹಾರ ನೀಡುವಂತೆ ಮತ್ತು ಆರ್ಥಿಕ ಸಂಕಷ್ಟಗಳನ್ನು ಕೊನೆಗೊಳಿಸುವಂತೆ ನಾವು ಪ್ರಧಾನಿಗೆ ಮನವಿ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.
ನಾಳೆ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಷನ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!