ಜಡ್ಜ್​ಗೆ ಅನಾರೋಗ್ಯ: ಹಿಜಾಬ್ ಆರ್ಜಿ ವಿಚಾರಣೆಗೆ ಹೊಸ ಪೀಠ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಜಾಬ್​ ನಿಷೇಧಿಸಿ ಕರ್ನಾಟಕ ಹೈಕೋರ್ಟ್​ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವಿಳಂಬವಾಗುತ್ತಿರುವ ಕಾರಣ ಈಗಿನ ಪೀಠದ ಬದಲಾಗಿ ಮತ್ತೊಂದು ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಲಾಗುವುದು ಎಂದು ಸುಪ್ರೀಂಕೋರ್ಟ್​ ತಿಳಿಸಿದೆ.
ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಪೀಠದ ಜಡ್ಜ್​ಗಳಲ್ಲಿ ಒಬ್ಬರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್​.ವಿ. ರಮಣ ಮಂಗಳವಾರ ತಿಳಿಸಿದರು.
ಅರ್ಜಿಗಳನ್ನು ಕೈಗೆತ್ತಿಕೊಳ್ಳಲು ದಿನಾಂಕ ನಿಗದಿ ಮಾಡುವ ವಿಷಯವಾಗಿ ನಡೆದ ಚರ್ಚೆಯಲ್ಲಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರು ಹಿಜಾಬ್​ ಅರ್ಜಿಯನ್ನು ಪ್ರಸ್ತಾಪಿಸಿದರು. ಈ ವೇಳೆ ಸೂಚಿತ ಕೋರ್ಟ್​ ಪೀಠದ ಒಬ್ಬ ಜಡ್ಜ್​ ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಅರ್ಜಿಯನ್ನು ಅದೇ ಪೀಠದಿಂದ ವಿಚಾರಣೆ ನಡೆಸುವುದು ಕಷ್ಟ. ಹೊಸ ಪೀಠಕ್ಕೆ ನೀಡಲು ಯೋಜಿಸಲಾಗುವುದು ಎಂದು ಸಿಜೆಐ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!