Wednesday, November 5, 2025

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ಶುಕ್ರವಾರ​ ಮಧ್ಯಂತರ ತಡೆ ನೀಡಿದೆ.

2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್. ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಇಂದು ಮಧ್ಯಂತರ ತಡೆ ನೀಡಿದೆ.

error: Content is protected !!