Sunday, September 7, 2025

ಜೈಲಿನಲ್ಲಿದ್ದೇ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಹೆಸರಿನಲ್ಲಿ ಕೋಟಿ ಕೋಟಿ ರೂ. ದೇಣಿಗೆ ನೀಡಿದ ಸುಕೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟಿ ಜಾಕ್ವೆಲಿನ್ ಫರ್ನಾಂಡಿಸ್  ಆಗಸ್ಟ್ 11ರಂದು ತಮ್ಮ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಈ ಸಂದರ್ಭದಲ್ಲಿ, ದೇಶಾದ್ಯಂತ ಅಭಿಮಾನಿಗಳಿಂದ ಅವರಿಗೆ ಶುಭಾಶಯಗಳ ಮಹಾಪೂರ ಹರಿದು ಬಂತು. ಅದೇ ರೀತಿ, 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಕೂಡ ಅವರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೆ ಜಾಕ್ವೆಲಿನ್‌ ಹೆಸರಿನಲ್ಲಿ ಕೋಟಿ ಕೋಟಿ ರೂ. ಹಣ ದೇಣಿಗೆ ನೀಡಿದ್ದಾರೆ.

ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್, ಪತ್ರ ಬರೆದು ಜಾಕ್ವೆಲಿನ್​ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾನೆ. ‘ನಿಮಗೆ ಹುಟ್ಟುಹಬ್ಬದ ಶುಭಾಶಯಗಳು.. ದೇವರು ನಿಮ್ಮನ್ನು ಆಶೀರ್ವದಿಸಲಿ’ ಎಂದು ಆತ ಈ ಪತ್ರದಲ್ಲಿ ಬರೆದಿದ್ದಾನೆ. ಇದು ಮಾತ್ರವಲ್ಲದೆ, ಜೈಲಿನಲ್ಲಿ ಕುಳಿತು, ಜಾಕ್ವೆಲಿನ್ ಹೆಸರಲ್ಲಿ 25 ಕೋಟಿ ರೂಪಾಯಿ ನೀಡಿದ್ದಾಗಿ ಆತ ಹೇಳಿದ್ದಾನೆ.

‘ಉತ್ತರಾಖಂಡದಲ್ಲಿ ಬಹಳ ದುರದೃಷ್ಟಕರ ಘಟನೆ ನಡೆದಿದೆ. ನೂರಾರು ಜನರು ಮೇಘಸ್ಫೋಟದಿಂದ ತೊಂದರೆಗೀಡಾಗಿದ್ದಾರೆ. ಅನೇಕರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ನಾನು ನಿಮ್ಮ ಹುಟ್ಟುಹಬ್ಬದ ಉಡುಗೊರೆಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂ.ಗಳನ್ನು ದೇಣಿಗೆ ನೀಡುತ್ತಿದ್ದೇನೆ. ಈ ಹಣವು ಅಲ್ಲಿನ ಜನರಿಗೆ ಸ್ವಲ್ಪ ಸಹಾಯ ಮಾಡುತ್ತದೆ’ ಎಂದು ಬರೆದಿದ್ದಾರೆ.

ಇದನ್ನೂ ಓದಿ