ಟೇಕಾಫ್​ ಆದ ಬೆನ್ನಲೇ ಕಳಚಿ ಬಿತ್ತು ವಿಮಾನದ ಚಕ್ರ: ವಿಡಿಯೋ ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುನೈಟೆಡ್ ಏರ್‌ಲೈನ್ಸ್‌ನ ಬೋಯಿಂಗ್ 777 ವಿಮಾನವು ಟೇಕಾಫ್​ ಆದ ಕೆಲವೇ ಕ್ಷಣಗಳಲ್ಲಿ ಹಿಂದಿನ ಚಕ್ರ ಕಳಚಿ ಬಿದ್ದಿರುವ ಘಟನೆ ನಡೆದಿದೆ.

ಜಪಾನ್‌ಗೆ ಹೊರಟಿದ್ದ ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ಸ್ಯಾನ್ ಫ್ರಾನ್ಸಿಸ್ಕೋದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಿಂಭಾಗದ ಲ್ಯಾಂಡಿಂಗ್ ಗೇರ್‌ನಲ್ಲಿ ಟೈರ್ ಸ್ಫೋಟ ಸಂಭವಿಸಿ ಟೈರ್ ಹಾರಿ ಕಳಚಿ ನೆಲಕ್ಕೆ ಬಿದ್ದಿದೆ. ಈ ವಿಡಿಯೋ ವೈರಲ್ ಆಗಿದೆ.

ವಿಮಾನದಲ್ಲಿ ಅನುಭವಿ ಪೈಲಟ್‌ಗಳು ಇದ್ದಿದ್ದರಿಂದ ಯಾವುದೇ ಅನಾಹುತ ಸಂಭವಿಸಿರಲಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಟೈರ್ ಹಾರಿಹೋಗಿರುವುದನ್ನು ಅರಿತ ಪೈಲಟ್‌ ವಿಮಾನವನ್ನು ಸುರಕ್ಷಿತವಾಗಿ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರು. ಈ ಬೋಯಿಂಗ್​ ವಿಮಾನದಲ್ಲಿ 235 ಪ್ರಯಾಣಿಕರು ಮತ್ತು 14 ಸಿಬ್ಬಂದಿ ಪ್ರಯಾಣ ಮಾಡುತ್ತಿದ್ದರು.

ಬೋಯಿಂಗ್ 777 ವಿಮಾನವು ರನ್ ವೇಯಲ್ಲಿ ನಿಧಾನವಾಗಿ ಇಳಿದಿದೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗುತ್ತಿದ್ದಂತೆ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಹರ್ಷಗೊಂಡಿದ್ದಾರೆ.

ವಿಮಾನವು ಹಾರಾಡುವ ವೇಳೆ ಹಾರಿಹೋದ ಟೈರ್ ನೇರವಾಗಿ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಮೇಲೆ ಬಿದ್ದಿದೆ. ಕಾರಿನ ಮಧ್ಯ ಮತ್ತು ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಆದರೆ, ವಿಮಾನದಿಂದ ಟೈರ್ ಬೀಳುವ ವೇಳೆ ಕಾರು ಜಖಂಗೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಕುರಿತು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಘಟನೆಯ ಬಗ್ಗೆ ತನಿಖೆ ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!