January17, 2026
Saturday, January 17, 2026
spot_img

ಟ್ರಾಫಿಕ್‌ ದಂಡದ ಮೊತ್ತ ಪಾವತಿಸುವ ಮುನ್ನ ಎಚ್ಚರ!! ಯಾಕೆ ಗೊತ್ತಾ? ಈ ಸ್ಟೋರಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು ಇದರಿಂದ 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ.

ವಂಚಕರ ಮೆಸೇಜ್‌ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಮಾಯವಾಗುತ್ತದೆ. ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಟೆಕ್ಕಿ ದೂರು ನೀಡಿದ್ದಾರೆ.

ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

Must Read

error: Content is protected !!