ಡಾ.ಡಿ. ವೀರೇಂದ್ರ ಹೆಗ್ಗಡೆ, ಪಿ.ಟಿ. ಉಷಾ ಸಹಿತ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದ್ದಾರೆ.
ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ. ಉಷಾ ಹಾಗೂ ಸಂಗೀತ ನಿರ್ದೇಶಕ ಇಳಯರಾಜ ಮತ್ತು ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ನಾಲ್ಕು ನಾಮನಿರ್ದೇಶಿತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಾಗಿದ್ದಾರೆ. ಅವರ ಕೊಡುಗೆಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಮನ್ನಣೆಯನ್ನು ಪಡೆದಿದ್ದಾರೆ. ನಾಲ್ಕು ನಾಮನಿರ್ದೇಶಿತ ಪ್ರತಿನಿಧಿಗಳಲ್ಲಿ ಮೂವರು ದಕ್ಷಿಣ ಭಾರತದ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!