ಡ್ರಗ್ ಪೆಡ್ಲರ್ ಗಳ ಜೊತೆ ಸ್ಯಾಂಡಲ್​ವುಡ್ ನಟ-ನಟಿಯರ ನಂಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್​ವುಡ್ ನಲ್ಲಿ ಮತ್ತೆ ಡ್ರಗ್ಸ್ ಹಾವಳಿ ಶುರುವಾಗಿದೆ.

ಕನ್ನಡದ ಕಿರುತೆರೆ, ಚಲನಚಿತ್ರ ನಟ ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವುದು ಸಿಸಿಬಿ ತನಿಖೆ ವೇಳೆ ಬಯಲಿಗೆ ಬಂದಿದೆ.

ಎರಡು ಮೂರು ವರ್ಷಗಳ ಹಿಂದೆ (Sandalwood) ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ (CCB) ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ ಬಯಲಿಗೆ ಬಂದಿದೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. ಅದರಂತೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು, ಇತ್ತೀಚೆಗೆ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿದ್ದರು.

ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ನಟ, ನಟಿಯರ ನಂಟು ಬಯಲಿಗೆ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!