ದೆಹಲಿ ಮದ್ಯ ಹಗರಣ ಪ್ರಕರಣ: 6 ಗಂಟೆಗಿಂತಲೂ ಹೆಚ್ಚು ಕಾಲ ಕೆಸಿಆರ್ ಪುತ್ರಿ ಕವಿತಾರ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ತೆಲಂಗಾಣ ರಾಷ್ಟ್ರ ಸಮಿತಿ ಎಂಎಲ್‌ಸಿ ಆಗಿರುವ ಕಲ್ವಕುಂಟ್ಲಾ ಕವಿತಾ ಅವರನ್ನು ಕೇಂದ್ರ ತನಿಖಾ ದಳ ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.

ಸಿಬಿಐ ಅಧಿಕಾರಿಗಳ ತಂಡಬೆಳಗ್ಗೆ 11 ಗಂಟೆ ಸುಮಾರಿಗೆ ಬಂಜಾರಾ ಹಿಲ್ಸ್‌ನಲ್ಲಿರುವ ಕವಿತಾ ಅವರ ನಿವಾಸಕ್ಕೆ ಆಗಮಿಸಿದ್ದು,ವಿಚಾರಣೆ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ಆರೋಪಿಯ ನವೆಂಬರ್ 30 ರ ರಿಮಾಂಡ್ ವರದಿಯಲ್ಲಿ ಕವಿತಾ ಅವರ ಹೆಸರು ಕಾಣಿಸಿಕೊಂಡಾಗಿನಿಂದ ರಾಜಕೀಯ ವಲಯಗಳಲ್ಲಿ ಉನ್ನತ ಮಟ್ಟದ ಚರ್ಚೆಗಳು ನಡೆದಿವೆ. ‘ಹಗರಣ’ದಲ್ಲಿ ಆಪಾದಿತ ಕಿಕ್‌ಬ್ಯಾಕ್‌ಗಳ ಕುರಿತು ದೆಹಲಿ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ರಿಮಾಂಡ್ ವರದಿಯಲ್ಲಿ ಅವರ ಹೆಸರು ಕೇಳಿ ಬಂದಾಗ ತಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧ ಎಂದು ಕವಿತಾ ಹೇಳಿದ್ದರು.

ತನಿಖೆಯ ಪ್ರಕಾರ, ವಿಜಯ್ ನಾಯರ್, ಎಎಪಿ ನಾಯಕರ ಪರವಾಗಿ ಸೌತ್ ಗ್ರೂಪ್ (ಶರತ್ ರೆಡ್ಡಿ, ಎಂಎಸ್ ಕೆ ಕವಿತಾ, ಮಾಗುಂಟ ಶ್ರೀನಿವಾಸುಲು ರೆಡ್ಡಿ ನಿಯಂತ್ರಿಸುವ ಗುಂಪಿನಿಂದ) ಅಮಿತ್ ಅರೋರಾ ಸೇರಿದಂತೆ ವಿವಿಧ ವ್ಯಕ್ತಿಗಳಿಂದ ಕನಿಷ್ಠ 100 ಕೋಟಿ ರೂ.ಗಳಷ್ಟು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಇಡಿ ಆರೋಪಿಗಳಲ್ಲಿ ಒಬ್ಬನಾದ ಅಮಿತ್ ಅರೋರಾಗೆ ದೆಹಲಿ ನ್ಯಾಯಾಲಯದಲ್ಲಿ ಸಲ್ಲಿಸಿದ ರಿಮಾಂಡ್ ವರದಿಯಲ್ಲಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!