ದೇಶದ ಅಭಿವೃದ್ಧಿಗೆ ಜನಪರ ಬಜೆಟ್: ಸಚಿವ ಪ್ರಭು ಚವ್ಹಾಣ

ಹೊಸ ದಿಗಂತ ವರದಿ, ಯಾದಗಿರಿ:

ಜನಪ್ರಿಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ ಅತ್ಯುತ್ತಮ ಜನಪರ ಬಜೆಟನ್ನು ಮುಕ್ತಕಂಠದಿಂದ ಸ್ವಾಗತಿಸುತ್ತೇನೆ ಎಂದು ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ ತಿಳಿಸಿದ್ದಾರೆ.

ಕೊರೋನಾ ಎಂಬ ಮಹಾಮಾರಿಯ ಸಂಕಷ್ಟಕ್ಕೆ ಸಿಲುಕಿದ್ದ ಭಾರತದ ಆರ್ಥಿಕತೆಗಳಿಗೆ ಚೈತನ್ಯ ತುಂಬುವ ಉತ್ತಮ ಬಜೆಟ್‌ನ್ನು ನೀಡುವ ಮೂಲಕ ಭಾರತ ಅಭಿವೃದ್ಧಿ ಪಥದತ್ತ ಮುನ್ನುಗ್ಗುತ್ತಿದೆ ಎನ್ನುವುದಕ್ಕೆ ಜನಪರ ಬಜೆಟ್ ಸಾಕ್ಷಿ.
ಕೃಷಿ, ಪಶು ಸಂಗೋಪನೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ಕೃಷಿ ಪರಿಕರಗಳ ಬೆಲೆ ಇಳಿಕೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನದಿಗಳ ಜೋಡಣೆ, ಮನೆ ಮನೆಗೂ ಶುದ್ಧ ಕುಡಿಯುವ ನೀರು, ಪ್ರತಿ ಗ್ರಾಮಕ್ಕೂ 5ಜಿ ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿಗೆ 20 ಸಾವಿರ ಕೋಟಿ ರೂಪಾಯಿಗಳು, ವಿಶ್ವದರ್ಜೆಯ ಡಿಜಿಟಲ್ ಪಾಠಶಾಲೆ, ದೇಶದ ನೂರು ಜಿಲ್ಲೆಗಳ ನಗರಗಳಿಗೆ ಪೈಪ್ ಲೈನ್ ಮೂಲಕ ಗ್ಯಾಸ್ ಸಂಪರ್ಕ, ಬೆಂಗಳೂರು ಮೆಟ್ರೋ ರೈಲು ಮಾರ್ಗ ವಿಸ್ತರಣೆ, ಉತ್ಪಾದನಾ ಕ್ಷೇತ್ರಕ್ಕೆ ನೀಡಲಾಗಿರುವ ಆದ್ಯತೆ ಸೇರಿದಂತೆ ಎಲ್ಲಾ ವಲಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ದೇಶದ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ.

2023ರ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ, ಡಿಜೀಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು, ಆರ್ಥಿಕ ಹಿಂಜರಿತ ಸರಿಪಡಿಸುವ ದೃಷ್ಠಿ ಮತ್ತು ದೀರ್ಘಾವಧಿ ಆರ್ಥಿಕ ಅಭಿವೃದ್ದಿಗೆ ಗುರಿ ಹೊಂದುವ ಮೂಲಕ ಅತ್ಯುತ್ತಮವಾದ ಬಜೆಟ್ ಮಾಡಿರುವು ಸ್ವಾಗತಾರ್ಹ.

ಪ್ರಧಾನ ಮಂತ್ರಿಯವರಾದ ನರೇಂದ್ರ ಮೋದಿ ಅವರಿಗೆ, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!