January19, 2026
Monday, January 19, 2026
spot_img

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ: ಮಾಸ್ಕ್‌ಮ್ಯಾನ್‌ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮಾಸ್ಕ್‌ ತೊಟ್ಟು ಶವಗಳನ್ನು ಹೂತಿದ್ದ ಜಾಗ ಎಂದು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಲವು ವರ್ಷಗಳ ಹಿಂದೆ ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮಾಸ್ಕ್‌ ಮ್ಯಾನ್‌ನನ್ನು ಇದೀಗ ಅರೆಸ್ಟ್‌ ಮಾಡಲಾಗಿದೆ.

ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಸಾಕ್ಷಿ ಸಂರಕ್ಷಣಾ ಯೋಜನೆಯಡಿ ರಕ್ಷಣೆ ಪಡೆದಿದ್ದ ಅನಾಮಿಕ ದೂರುದಾರನನ್ನು ಎಸ್‌ಐಟಿ ಬಂಧಿಸಿದೆ. ದೂರಿನಲ್ಲಿ ಸುಳ್ಳು ಮಾಹಿತಿ ಮತ್ತು ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಾಗಿದೆ. ಸಮಾಧಿ ಸ್ಥಳಗಳಲ್ಲಿ ಅಸ್ತಿಪಂಜರಗಳು ಪತ್ತೆಯಾಗಿಲ್ಲ. ಬಂಧಿತನ ವಿಚಾರಣೆ ಮುಂದುವರೆದಿದೆ.

Must Read

error: Content is protected !!