April 7, 2026
Tuesday, April 7, 2026
spot_img

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್ ಅರೆಸ್ಟ್‌: ಹಣ, ಐಷಾರಾಮಿ ಕಾರ್‌ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಶ್ಚಿಮ ಆರ್ಕ್ಟಿಕಾ, ಸಬ್ರೋಗಾ, ಪೌಲ್ವಿಯಾ ಮತ್ತು ಲೊಡೋನಿಯಾದಂತಹ ರಾಷ್ಟ್ರಗಳ ರಾಯಭಾರಿ ಕಚೇರಿ ಎಂದು ವಂಚನೆ ಮಾಡ್ತಿದ್ದ ಶಂಕಿತ ಹರ್ಷವರ್ಧನ್ ಜೈನ್‌ನನ್ನು ಯುಪಿ ಎಸ್‌ಟಿಎಫ್ ಭೇದಿಸಿ, ಬಂಧಿಸಿದೆ.

ದಾಳಿಯಲ್ಲಿ ಹಲವಾರು ನಕಲಿ ಅಂಚೆಚೀಟಿಗಳು, ಪಾಸ್‌ಪೋರ್ಟ್‌ಗಳು, ರಾಜತಾಂತ್ರಿಕ ನೋಂದಣಿ ಫಲಕಗಳು, ವಿದೇಶಿ ಮತ್ತು ದೇಶೀಯ ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ರಾಜತಾಂತ್ರಿಕ ನಂಬರ್ ಪ್ಲೇಟ್‌ಗಳನ್ನು ಹೊಂದಿರುವ ಹಲವಾರು ಕಾರುಗಳನ್ನು ಹೊಂದಿದ್ದ. ಜೊತೆಗೆ ಪ್ರಧಾನಿ, ರಾಷ್ಟ್ರಪತಿ ಮತ್ತು ಇತರ ಗಣ್ಯರೊಂದಿಗೆ ತಮ್ಮ ಮಾರ್ಫ್ ಮಾಡಿದ ಛಾಯಾಚಿತ್ರಗಳನ್ನು ಬಳಸಿಕೊಂಡು ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿರೋದು ಬೆಳಕಿಗೆ ಬಂದಿದೆ. ದೇಶದಲ್ಲಿ ವ್ಯಕ್ತಿಗಳು ಮತ್ತು ಕಂಪನಿಗಳಿಗೆ ದಲ್ಲಾಳಿ ಮಾಡುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹವಾಲಾ ದಂಧೆಯನ್ನು ನಡೆಸುವುದು ಪತ್ತೆಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !