ನನ್ನ ಆಪ್ತ ಸಹೋದ್ಯೋಗಿ ಸಾವಿನಿಂದ ದುಃಖಿತನಾಗಿದ್ದೇನೆ: ಸಿಎಂ ಬೊಮ್ಮಾಯಿ ಟ್ವೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!