‘ನವ ಭಾರತದ ವಾಸ್ತುಶಿಲ್ಪಿ’ ಗೆ ಆತ್ಮೀಯ ಸ್ವಾಗತ: ಯುಪಿ ಸಿಎಂಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರಾಣಸಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ‘ನವ ಭಾರತದ ವಾಸ್ತುಶಿಲ್ಪಿ’ ಗೆ ಸ್ವಾಗತ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ನವ ಭಾರತದ ವಾಸ್ತುಶಿಲ್ಪಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ 25 ಕೋಟಿ ಜನರಿಂದ ಹೃತ್ಪೂರ್ವಕ ಸ್ವಾಗತ ಎಂದು ತಿಳಿಸಿದರು.

ನಗರದಲ್ಲಿ ಎರಡು ದಿನಗಳ ವಾಸ್ತವ್ಯ ಹೂಡಲಿರುವ ಮೋದಿ ಅವರು, ‘ಕಾಶಿ ತಮಿಳು ಸಂಗಮಂ’ ಎರಡನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ‘ಕನ್ಯಾಕುಮಾರಿ-ವಾರಾಣಸಿ ತಮಿಳು ಸಂಗಮ್‌ ರೈಲಿ’ಗೆ ಚಾಲನೆ ನೀಡುವುದರ ಜೊತೆಗೆ ವಾರಾಣಸಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಇಂದು ಹಾಗೂ ನಾಳೆ ಎರಡು ದಿನಗಳ ವಾರಾಣಸಿ ಪ್ರವಾಸವನ್ನು ಕೈಗೊಂಡಿರುವ ಪ್ರಧಾನಿ ಮೋದಿ, ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.15ರ ವೇಳೆಗೆ ನಮೋ ಘಾಟ್‌ನಲ್ಲಿ ‘ಕಾಶಿ ತಮಿಳು ಸಂಗಮಂ 2023’ ಅನ್ನು ಉದ್ಘಾಟಿಸಲಿದ್ದಾರೆ. ನಾಳೆ (ಸೋಮವಾರ) ಬೆಳಿಗ್ಗೆ ಸ್ವರವೇದ ಮಹಾಮಂದಿರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ₹19,150 ಕೋಟಿಗೂ ಹೆಚ್ಚಿನ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!