Sunday, August 31, 2025

ನಾನು ಏನು ತಪ್ಪು ಮಾಡಿಲ್ಲ, RSS ಗೀತೆ ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾನು ಏನು ತಪ್ಪು ಮಾಡಿಲ್ಲ. ಆರ್‌ಎಸ್‌ಎಸ್‌ ಗೀತೆ ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಆ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ಅದನ್ನ ಪ್ರಶ್ನೆ ಮಾಡಿದ್ರೆ ಅವರು ಮೂರ್ಖರು. ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಆದ್ರೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ