Wednesday, October 15, 2025

ನಾಳೆ ರಾಜ್ಯಾದ್ಯಂತ ಜೋರು ಗಾಳಿಯೊಂದಿಗೆ ಮಳೆ, ಹವಾಮಾನ ಇಲಾಖೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸದ್ಯ ರಾಜ್ಯದಲ್ಲಿ ಬಿಡುವು ನೀಡಿರುವ ಮಳೆ , ಮುಂದಿನ ವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ. ರವಿವಾರ ದಂದು ರಾಜ್ಯದಾದ್ಯಂತ ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸಾಧ್ಯತೆಯಿದೆ. ಆದರೆ, ಆಗಸ್ಟ್​ 05 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಆಗಸ್ಟ್​ 07 ರವರೆಗೆ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರವಿವಾರ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಂಭವ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ನಾಳೆ (ಆ.03) ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ.

error: Content is protected !!