ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಶಾಸಕ ಸುಭಾಷ್ ಆರ್. ಗುತ್ತೇದಾರ ಹರ್ಷ

ಹೊಸ ದಿಗಂತ ವರದಿ, ಕಲಬುರಗಿ:

ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತದಾರರು ಅಭೂತಪೂರ್ವ ಬೆಂಬಲ ನೀಡಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್. ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಬಗ್ಗೆ ಜನ ಉತ್ತಮ ಅಭಿಪ್ರಾಯ ಹೊಂದಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ ಅಲ್ಲದೇ ಜನ ಯಾವತ್ತೂ ಅಭಿವೃದ್ಧಿ ರಾಜಕಾರಣವನ್ನು ಬಯಸುತ್ತಾರೆ ಎನ್ನುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದಾದ್ಯಂತ ಡಬಲ್ ಇಂಜಿನ್ ಸರ್ಕಾರಗಳು ಗೆಲ್ಲುತ್ತಿವೆ. ಮತದಾರರು ಪ್ರತಿಪಕ್ಷಗಳ ತುಷ್ಟೀಕರಣ ರಾಜಕಾರಣಕ್ಕಿಂತ ಬಿಜೆಪಿಯ ಅಭಿವೃದ್ಧಿ ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!