ಪರೀಕ್ಷೆಯಲ್ಲಿ ಅಂಕ ಕಡಿಮೆ ನೀಡಿದ್ದಾರೆ ಎಂದು ಶಿಕ್ಷಕರನ್ನೇ ಕಟ್ಟಿಹಾಕಿ ಥಳಿಸಿದ ‘ವಿದ್ಯಾರ್ಥಿ’ಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರೀಕ್ಷೆಯಲ್ಲಿ ಅಂಕ ಕಡಿಮೆ ನೀಡಿದ್ದಾರೆ ಎಂಬ ಸಿಟ್ಟಿನಲ್ಲಿ ಶಿಕ್ಷಕರನ್ನು ಮರಕ್ಕೆ ಕಟ್ಟಿ ಹಾಕಿದ ವಿದ್ಯಾರ್ಥಿಗಳು ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ನಡೆದಿದೆ.
ಈ ಬಗೆಗಿನ ವಿಡಿಯೋವೊಂದು ವ್ಯಾಪಕ ಪ್ರಚಾರ ಪಡೆಯುತ್ತಿದ್ದು, ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಸಮವಸ್ತ್ರ ಧರಿಸಿದ ಶಾಲಾ ಮಕ್ಕಳ ಒಂದು ದೊಡ್ಡ ಗುಂಪು ಉಪನ್ಯಾಸ ನೀಡುವಾಗ ಶಿಕ್ಷಕರನ್ನು ಮರಗಳಿಂದ ಕಟ್ಟಿಹಾಕಿ ಥಳಿಸುತ್ತಿರು ದೃಶ್ಯ ವಿಡಿಯೋದಲ್ಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ, ನಾವು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದೇವೆ. ಎಲ್ಲಾ ಶಿಕ್ಷಕರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾವು ಅಲ್ಲಿಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು ಪ್ರಾಕ್ಟಿಕಲ್ಸ್ ನಲ್ಲಿ ತಮಗೆ ಬಹಳ ಕಡಿಮೆ ಅಂಕಗಳನ್ನು ನೀಡಲಾಗಿದೆ ಮತ್ತು ತಮ್ಮ ಶಿಕ್ಷಕರಿಂದ ಸೂಕ್ತ ಪ್ರತಿಕ್ರಿಯೆಯನ್ನು ಪಡೆದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಶಿಕ್ಷಕರಿಗೆ ಥಳಿಸುವ ದೃಶ್ಯಗಳನ್ನು ಚಿತ್ರೀಕರಿಸಿ ಬಳಿಕ ವಿದ್ಯಾರ್ಥಿಗಳು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಈ ವಿಡಿಯೋ ಬಗೆಗಿನ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!