ಪ್ರಿನ್ಸೆಸ್ ಮಿರಾಲ್‌ನಲ್ಲಿ ತೈಲ ಸೋರಿಕೆ: ಮೀನುಗಾರಿಕೆಗೆ ನಿಷೇಧ ಹೇರಿದ ಇಲಾಖೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:
ಮಂಗಳೂರು ನಗರದ ಹೊರವಲಯ ಉಳ್ಳಾಲ ಪರಿಸರದಲ್ಲಿ ಮುಳುಗಡೆಯಾಗುತ್ತಿರುವ ಪ್ರಿನ್ಸೆಸ್ ಮಿರಾಲ್ ಸರಕು ಸಾಗಾಟ ಹಡಗಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳ್ಳಾಲ ವಲಯದ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ.
ಚೀನಾ ಮೂಲದ ಈ ಹಡಗು ಸರಕು ಹೇರಿಕೊಂಡು ತೆರಳುತ್ತಿದ್ದ ಸಂದರ್ಭ ಉಳ್ಳಾಲ ಪರಿಸರದಲ್ಲಿ ಅಪಾಯಕ್ಕೆ ಸಿಲುಕಿತ್ತು. ಇದರಲ್ಲಿದ್ದ ಸಿಬ್ಬಂದಿಗಳನ್ನು ರಕ್ಷಿಸಲಾಗಿತ್ತಾದರೂ ಹಡಗನ್ನು ರಕ್ಷಿಸುವುದು ಸಾಧ್ಯಾವಗಿರಲಿಲ್ಲ. ಹಡಗು ನಿಧಾನವಾಗಿ ಮುಳುಗಡೆಯಾಗುತ್ತಿದ್ದು, ಭಾರುಇಈ ಮುನ್ನೆಚ್ಚರಿಕೆಗಳ ಬಳಿಕವೂ ಈಗ ತೈಲ ಸೋರಿಕೆ ಕಾಣಿಸಿಕೊಂಡಿದೆ.
ಆದೇಶ ಉಲ್ಲಂಸಿ ಮೀನುಗಾರಿಕೆಯಲ್ಲಿ ತೊಡಗಿಕೊಂಡಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!