Friday, September 12, 2025

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಮೃತ್ಯು, ಮೂವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ಮದನ್ ಸಿಂಗ್ ಮೃತ ವ್ಯಕ್ತಿ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಮೂವರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ