Sunday, August 31, 2025

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಿಂಗಳ ಕೊನೆವರೆಗೂ ಜೋರು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ