ಬೆಂಗಳೂರು ಬಂದ್ ಗೆ ಚಿತ್ರೋದ್ಯಮ ಸಾಥ್: ನಾಳೆ ನೋ ಶೂಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾವೇರಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಮಂಗಳವಾರ (ಸೆಪ್ಟೆಂಬರ್ 26) ಬಂದ್​ಗೆ ಕರೆ ನೀಡಲಾಗಿದೆ. ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇದರ ಜೊತೆಗೆ ಪ್ರದರ್ಶಕ ಸಂಘದವರು ಸಿನಿಮಾ ಪ್ರದರ್ಶನ ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.

ಕನ್ನಡ ಚಿತ್ರರಂಗದ ಪ್ರದರ್ಶಕ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಮಾತನಾಡಿದ್ದಾರೆ. ‘ಅಧ್ಯಕ್ಷರು ಪದಾಧಿಕಾರಿಗಳ ಜೊತೆ ಕೂತು ಚರ್ಚೆ ಮಾಡಿದ್ದೇವೆ. ನೀರಿನ ವಿಷಯ, ಭಾಷೆಯ ವಿಷಯಕ್ಕೆ ಇಡೀ ಚಿತ್ರೋದ್ಯಮ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ನೀರಿನ ವಿಚಾರದಲ್ಲಿ ಕರೆ ನೀಡಿದ ಬಂದ್​ಗೆ ಚಿತ್ರಮಂದಿರಗಳು ಬೆಂಬಲಕ್ಕೆ ಸದಾ ಸಿದ್ಧ. ಬಂದ್​ಗೆ ಚಿತ್ರೋದ್ಯಮ ಬೆಂಬಲ ನೀಡುತ್ತಿದೆ. ನಾಡಿನ ಹಿತಕ್ಕಾಗಿ ಚಿತ್ರೋದ್ಯಮ ಎಂದಿಗೂ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ. ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದು ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!